ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ ಎಂ ಎಸ್ ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಮುಬೀನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರೀತಿಯ ವಿಚಾರಕ್ಕೆ ಆರೋಪಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಸಿಫಾ (22) ಎಂದು ತಿಳಿದುಬಂದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂ ಎಸ್ ಸಿ ಓದುತ್ತಿದ್ದ ಶಿಫಾ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ನಿವಾಸಿಯಾಗಿದ್ದಾಳೆ. ಇದೀಗ ಪರಿಚಯಸ್ತ ಮುಬೀನ್ ನಿಂದಲೇ ವಿದ್ಯಾರ್ಥಿನಿ ಸಿಫಾ ಕೊಲೆಯಾಗಿದ್ದಾಳೆ. ಸದ್ಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.