ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಪಾತ್ರ ಇದೆ ಎಂದು ಉಲ್ಲೇಖಿಸಲಾಗಿದೆ.
ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3991 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಪಟ್ಟಣಗೆರೆ ಶೆಡ್ ನಲ್ಲಿ ನಟ ದರ್ಶನ್ ಇರೋದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಜೊತೆಗೆ ಕೊಲೆಗೂ ಮುನ್ನ ಸ್ಟೋನಿ ಬ್ರೂಕ್ಸ್ ಪಬ್ ನಲ್ಲಿ ಸಭೆ ಮಾಡುವ ರೀತಿಯಲ್ಲಿ ಪಾರ್ಟಿ ಮಾಡಿದ್ದಾರೆ ಎಂದು ಉಲ್ಲೆಖಿಸಲಾಗಿದೆ.
ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.