ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ನಟ ಶಿವರಾಜ್ ಕುಮಾರ್ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ. ಕಿಡ್ನಿ ಸ್ಟೋನ್ ಸಮಸ್ಯೆಯಾಗಿತ್ತು. ಅದಕ್ಕೆ ಚಿಕಿತ್ಸೆ ನೀಡಿದ್ದೇವೆ. ಸದ್ಯ ಅವರು ಈಗ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಶಿವರಾಜಕುಮಾರ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಂತಹ ಸಾಧ್ಯತೆ ಇದೆ.