ಬೆಂಗಳೂರು : ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಸದ್ಯಕ್ಕೆ ಹಣ ಬಿಡುಗಡೆ ಆಗಲ್ಲ ಎನ್ನಲಾಗಿದೆ.
ಜೂನ್ ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಆಗಸ್ಟ್ ತಿಂಗಳು ಆರಂಭವಾಗಿದ್ರೂ ಖಾತೆಗೆ ಹಣ ಬಾರದ ಹಿನ್ನೆಲೆಯಲ್ಲಿ ಮಹಿಳೆಯರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಇಂದು ಅಥವಾ ನಾಳೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿತ್ತು. ಈ ಬಗ್ಗೆ ಇಲಾಖೆ ಅಧಿಕಾರಿಗಳನ್ನು ಕೇಳಿದ್ರೂ ಅವರಿಗೂ ಈ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಗೃಹಲಕ್ಷ್ಮಿ ಹಣ ಸದ್ಯಕ್ಕೆ ಬಿಡುಗಡೆ ಆಗಲ್ಲ ಎಂದು ಹೇಳಲಾಗಿದೆ.