ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 13 ಆರೋಪಿಗಳು ಅಷ್ಟೇ ಅಲ್ಲ ಇದರ ಮೇಲೆ ನಾಲ್ವರು ಆರೋಪಿಗಳು ಕೂಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಕೊಲೆ ಆರೋಪಿಗಳ ಸಂಖ್ಯೆ 13 ರಿಂದ 17ಕ್ಕೆ ಏರಿಕೆ ಕಂಡಿದೆ.
ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಈಗಾಗಲೇ 13 ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಹತ್ಯೆ ಪ್ರಕರಣದ ನಾಲ್ವರು ಇದೀಗ ಆರೋಪಿಗಳು ನಾಪತ್ತೆಯಾಗಿದ್ದಾರೆಎಂದು ತಿಳಿದು ಬಂದಿದ್ದು, ನಾಪತ್ತೆಯಾಗಿರುವವರಿಗಾಗಿ ಪೊಲೀಸರಿಂದ ಇದೀಗ ಶೋಧ ಕಾರ್ಯ ಆರಂಭವಾಗಿದೆ. ನಟ ದರ್ಶನ್ ಗೆ ಈ ನಾಲ್ವರು ಆಪ್ತರು ಆಗಿದ್ದರು ಎಂದು ತಿಳಿದುಬಂದಿದೆ.
ಹೌದು ಈಗಾಗಲೇ ರೇಣುಕಾ ಸ್ವಾಮಿ ಎಂಬುವವರನ್ನು ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್, ವಿ. ವಿನಯ್, ಎಸ್. ಪ್ರದೋಶ್, ಎಂ. ಲಕ್ಷ್ಮಣ್, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಒಂದು ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.