ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
#WATCH | Mumbai | Actor Saif Ali Khan is receiving treatment in Lilavati Hospital And Research Centre after he sustained minor injuries following a scuffle with an intruder who entered his residence late last night
Visuals from outside the hospital pic.twitter.com/VQIVKQaf7h
— ANI (@ANI) January 16, 2025
ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್ ಉತ್ತಮಣಿ ಮಾಹಿತಿ ನೀಡಿದ್ದು, ಸೈಫ್ ಅವರ ಮೇಲೆ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಅವರನ್ನು ಲೀಲಾವತಿಯಲ್ಲಿ ಬೆಳಗಿನ ಜಾವ 3:30 ಕ್ಕೆ ಕರೆತರಲಾಯಿತು. ಅವರಿಗೆ ಆರು ಗಾಯಗಳಾಗಿದ್ದು, ಅವುಗಳಲ್ಲಿ ಎರಡು ಆಳವಾಗಿವೆ. ಒಂದು ಗಾಯ ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ. ನಾವು ಅವರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅಪರಾಧಿ ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
An unknown person entered Actor Saif Ali Khan’s residence and argued with his maid, late last night. When the actor tried to intervene and pacify the man, he attacked Saif Ali Khan and injured him. Police are investigating the matter: Mumbai Police
(file photo) pic.twitter.com/pHgByuxqB9
— ANI (@ANI) January 16, 2025