ಮಂಗಳೂರು : ಮಂಗಳೂರಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಪಿಕಪ್ ವಾಹನದಲ್ಲಿದ್ದ 19 ಗೋವುಗಳನ್ನ ರಕ್ಷಣೆ ಮಾಡಲಾಗಿದೆ. ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಬಜರಂಗದ ದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದಾರೆ.
ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಿಸುತ್ತಿದ್ದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೂಡುಬಿದರೆಯಿಂದ ಮಂಗಳೂರು ಕಡೆ ಪಿಕಪ್ ವಾಹನ ಬರುತ್ತಿತ್ತು. ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಬಗ್ಗೆ ಮಾಹಿತಿ ಬಂದಿದೆ.
ಈ ವೇಳೆ ಬಜರಂಗದಳ ಕಾರ್ಯಕರ್ತರು ವಿಷಯ ಆಧರಿಸಿ ಕಾರಿನಲ್ಲಿ ವಾಹನ ಬೆನ್ನಟ್ಟಿದ್ದಾರೆ. ಸೂರಲ್ಪಾಡಿ ಬಳಿ ಪಿಕಪ್ ವಾಹನವನ್ನು ತಡೆದಿದ್ದಾರೆ. ಈ ವೇಳೆ ಪಿಕಪ್ ವಾಹನದಲ್ಲಿದೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ವಾಹನದಿಂದ 19 ಗೋವುಗಳನ್ನ ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.