ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿದಂತ ಭೂಕುಸಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಕನ್ನಡಿಗರು ಬಲಿಯಾಗಿದ್ದಾರೆ.
ಈ ಕುರಿತಂತೆ ಚಾಮರಾಜನಗರ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಮೃತಪಟ್ಟಿದ್ದು, ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ ಅವರ ಶವವನ್ನು ರಕ್ಷಣಾ ತಂಡ ಹೊರಗೆ ತೆಗೆದಿದೆ.
ಕೇರಳದ ವಯಾನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರ್ಘಟನೆಯಲ್ಲಿ ಈವರೆಗೆ 128ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ.