ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಇದೀಗ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಾಳೆ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ವೈದೇಹಿ ಆಸ್ಪತ್ರೆಯಲ್ಲಿ ನಟ ಶಿವರಾಜಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬಹುಶಹ ಶಿವರಾಜಕುಮಾರ ಅವರು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಂತಹ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.