ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ನನಗೆ ಇಡಿ ಆಗಲಿ ಇನ್ಯಾವುದೇ ತನಿಖಾ ಸಂಸ್ಥೆಯಿಂದ ನೋಟಿಸ್ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ಬಂದಿದೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿರಾ? ನಾನೇನು ಅಂತ ಪಾಪ ಮಾಡಿದೀನಿ ನನಗೆ ಗೊತ್ತಾಗ್ತಿಲ್ಲ ಈ ರೀತಿ ಸುಳ್ಳು ಸುದ್ದಿ ಹರಡಿಸಬಾರದು. ಸುಮ್ಮನೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮನೆಗೆ ನೋಟಿಸ್ ಅಂಟಿಸೋಕೆ ಅದೇನೋ ಪೋಸ್ಟ್ ಆಫೀಸಾ? ಮನೆಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ ಈ ರೀತಿ ಒಬ್ಬ ವ್ಯಕ್ತಿಯ ತೇಜೋವಧೆ ಮಾಡಬಾರದು ಎಂದು ಮಾಧ್ಯಮಗಳಿಗೆ ಖಾರವಾಗಿ ಉತ್ತರ ನೀಡಿದರು.ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟಿಸ್ ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಭೈರತಿ ಸುರೇಶ್ ಅವರು ನವರಾತ್ರಿ ಬಳಿಕ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ ಎಂದು ಸುದ್ದಿ ಹರಡಿಸಲಾಗಿತ್ತು. ಇದೀಗ ಭೈರತಿ ಸುರೇಶ್ ನನಗೆ ಈಡಿ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಿದ್ದಾರೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದ್ದು, ಇಂದು ಸ್ನೇಹಮಯಿ ಕೃಷ್ಣ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.