ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬೆಳಿಗ್ಗೆ ಕರ್ನಾಟಕದ 13 ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ವ್ಯಾಪಕ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಬೀದರ್, ರಾಮನಗರ, ಉತ್ತರ ಕನ್ನಡ ಜಿಲ್ಲೆಗಳ 60 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಐದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
13 ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು 12 ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಶೋಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.
ಜನವರಿಯಲ್ಲಿ ಲೋಕಾಯುಕ್ತರು 10 ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ 40 ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ತುಮಕೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.