ಹೈದರಾಬಾದ್ : ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೈದರಾಬಾದ್‌ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ದುರಂತದಲ್ಲಿ 17 ಜನರು ಸಾವನ್ನಪ್ಪಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
Hyderabad, Telangana | A fire broke out in a building at Gulzar House near Charminar today at 6 am. 11 fire vehicles reached the spot. The cause of the fire is yet to be known: Fire official, Hyderabad.
— ANI (@ANI) May 18, 2025