ಚಿತ್ರದುರ್ಗ : ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ನಿನ್ನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ರ ಸುಹಾಸ್ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಇದೀಗ ಸಚಿವ ಸುಧಾಕರ್ ಅಂತಿಮ ಸಂಸ್ಕಾರದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಶಟಲ್ ಕೋರ್ಟ್ ಬದಲಾಗಿ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಪಾವಗಡ ರಸ್ತೆಯಲ್ಲಿ ಇರುವ ಮುಕ್ತಿ ಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.








