ನವದೆಹಲಿ: ನನ್ನ ತಂದೆ ಸತ್ತಿಲ್ಲ, ‘ನನ್ನ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ’ ಅಂತ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ ಹೇಳಿದ್ದಾರೆ. ಹಿರಿಯ ನಟ ಧರ್ಮೇಂದ್ರ (89) ಅವರನ್ನು ನವೆಂಬರ್ 10 ರಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಹಿಂದಿ ಚಲನಚಿತ್ರ ನಟ ಧರ್ಮೇಂದ್ರ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ನಟ ನಿಧನರಾಗಿದ್ದಾರೆ ಎಂಬ ವದಂತಿಗಳು ಹರಡಲು ಪ್ರಾರಂಭಿಸಿದ ನಂತರ, ಅವರ ಪುತ್ರಿ ಇಶಾ ಡಿಯೋಲ್, ಅವರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದೃಢಪಡಿಸಿದ್ದಾರೆ, ಸುಳ್ಳು ಸುದ್ದಿಗಳನ್ನು ಹರಡದಂತೆ ಜನರನ್ನು ಅವರು ಒತ್ತಾಯಿಸಿದ್ದಾರೆ.
ತಮ್ಮ ತಂದೆ, ಹಿರಿಯ ನಟ ಧರ್ಮೇಂದ್ರ ಅವರ ಸಾವಿನ ವದಂತಿಗಳನ್ನು ಇಶಾ ಡಿಯೋಲ್ ತಳ್ಳಿಹಾಕಿದ್ದಾರೆ. ಮಂಗಳವಾರ ಬೆಳಿಗ್ಗೆ, ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಧರ್ಮೇಂದ್ರ “ಸ್ಥಿರರಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.
“ಮಾಧ್ಯಮಗಳು ಅತಿರೇಕದಲ್ಲಿದ್ದು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ನನ್ನ ತಂದೆ ಸ್ಥಿರರಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದವರಿಗೆ ಗೌಪ್ಯತೆಯನ್ನು ನೀಡುವಂತೆ ನಾವು ಎಲ್ಲರಿಗೂ ವಿನಂತಿಸುತ್ತೇವೆ. ಅಪ್ಪನ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆಗಳಿಗೆ ಧನ್ಯವಾದಗಳು” ಎಂದು ಇಶಾ ಡಿಯೋಲ್ ಬರೆದಿದ್ದಾರೆ.









