ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಎಂಬುವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಯಲ್ಲಿ ಚಿತ್ರತಂಡದ ವಿರುದ್ಧ NCR ದಾಖಲಾಗಿದೆ.
ನವೆಂಬರ್ 25 ರಂದು ಚಿತ್ರದುರ್ಗದಲ್ಲಿ ಕಲ್ಟ್ ಸಿನಿಮಾ ಶೂಟಿಂಗ್ ಗೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಗೆ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಶೂಟ್ ಮಾಡುತ್ತಿದ್ದರು. ಶೂಟಿಂಗ್ ವೇಳೆ ಡ್ರೋನ್ ತುಂಡಾಗಿದ್ದು, ನಷ್ಟ ಭರಿಸದ ಚಿತ್ರದ ನಾಯಕ ಜೈದ್ ಖಾನ್ ಹಾಗು ನಿರ್ದೇಶಕ ಮೇಲೆ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ..
ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲ್ಟ್ ಚಿತ್ರ ತಂಡದ ವಿರುದ್ಧ ಠಾಣೆಯಲ್ಲಿ NCR ದಾಖಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಇದೀಗ ಎನ್ ಸಿ ಆರ್ ದಾಖಲಾಗಿದೆ. ಚಿತ್ರತಂಡಕ್ಕೆ ವಿಚಾರಣೆಗೆ ಬರುವಂತೆ ಪೊಲೀಸರು ಇದೀಗ ತಿಳಿಸಿದ್ದಾರೆ. ಮಂಗಳವಾರ ವಿಚಾರಣೆಗೆ ಬರಲು ಚಿತ್ರತಂಡಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಜೈದ್ ಖಾನ್ ಮೆಮೊರಿ ಕಾರ್ಡ್ ಕಿತ್ಕೊಂಡಿದ್ದಾರೆ ಎಂದು ಡ್ರೋನ್ ಟೆಕ್ನಿಷಿಯನ್ ಸಂತೋಷ ಅವರು ಆರೋಪಿಸಿದ್ದಾರೆ.