ಬೆಂಗಳೂರು : ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು, ಮೇ.8ರಂದು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ಮೇ 8ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
2024ನೇ ಸಾಲಿನ ಎಸ್ ಎಸ್ ಎಲ್ಲಿ ಪರೀಕ್ಷೆಯಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.