ರಾಯಚೂರು : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಗಳು ಮಹಿಳೆ ಮಾಡಿರುವ ಆರೋಪ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಶ್ರೀಗಳ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀಗಳು ಇದೊಂದು ಸುಳ್ಳು ಆರೋಪ, ಮಹಿಳೆ ಮಠದವರ ಜೊತೆಗೆ ಜಗಳ ಮಾಡಿಕೊಂಡಿದ್ದಳು, ಹೀಗಾಗಿ ನಾವು ಮಠದಿಂದ ಹೋಗುವಂತೆ ಹೇಳಿದ್ದೆ. ಆದರೆ ಈ ಮಹಿಳೆ ಸುಳ್ಳು ಅರೊಪ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಠಕ್ಕೆ ಕಳೆದ 6 ತಿಂಗಳ ಹಿಂದೆ ಬಂದಿದ್ದ ಮಹಿಳೆ ಹಾಗೂ ಮಹಿಳೆಯ ಮಗಳು. ಮೂಲತಃ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.