ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಭೀಕರವಾಗಿ ಗುಂಡಿನ ದಾಳಿ ನಡೆಸಿದ್ದಾನೆ. ಅಮೇರಿಕಾದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ತಕ್ಷಣ ಡೊನಾಲ್ಡ್ ಟ್ರಂಪ್ ಅವರನ್ನು ಭದ್ರತಾ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಅದೃಷ್ಟವಶತ್ ಟ್ರಂಪ್ಪ್ರಾಣಪಾಯದಿಂದ ಪಾರಾಗಿದ್ದಾರೆ.
ವೈಟ್ ಹೌಸ್ ಪ್ರತಿನಿಧಿಗಳ ಔತಣ ಕೂಟದಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಗುರಿಯಾಗಿಸಿಯೇ ಈ ಒಂದು ಗುಂಡಿನ ದಾಳಿ ನಡೆದಿದ್ದ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಕಾರ್ಯಕ್ರಮದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕೂಡಲೇ ಭದ್ರತಾ ಸಿಬ್ಬಂದಿಗಳು ದಾಳಿಕೋರನನ್ನು ಅರೆಸ್ಟ್ ಮಾಡಿದ್ದಾರೆ. ಸೀಕ್ರೆಟ್ ಸರ್ವಿಸಸ್ ಸಿಬ್ಬಂದಿಗಳು ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಈ ಒಂದು ಘಟನೆ ಕುರಿತು ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.








