ಹೈದರಾಬಾದ್ : ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮುಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್ ಚಾಲಕ ಸೇರಿ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ 15 ತಿಂಗಳ ಮಗುವೂ ಸೇರಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವೇಳೆ ಬಸ್‌ನಲ್ಲಿ 70 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ಈ ಅಪಘಾತದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ನೌಕರರು ಎಂದು ಪೊಲೀಸರು ಹೇಳುತ್ತಾರೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಪ್ರತಿದಿನ ಬೆಳಿಗ್ಗೆ ಹೈದರಾಬಾದ್‌ಗೆ ಹೋಗುತ್ತಾರೆ. ಭಾನುವಾರ ರಜೆ ಇದ್ದ ಕಾರಣ ಕೆಲವರು ತಮ್ಮ ಮನೆಗಳಿಗೆ ತೆರಳಿ ವಾಪಸ್ ಪ್ರಯಾಣ ಬೆಳೆಸಿದರು. ಈ ಅವಘಡದಿಂದಾಗಿ ಹೈದರಾಬಾದ್-ಬಿಜಾಪುರ ರಸ್ತೆಯಲ್ಲಿ ಭಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಂಡೂರಿನಿಂದ ಹೈದರಾಬಾದ್‌ಗೆ ಹೋಗುತ್ತಿದ್ದಾಗ ಈ ಬಸ್ ನಡೆದಿದೆ.
16 dead, eight injured in road accident in Rangareddy district in Telangana: Officials
— Press Trust of India (@PTI_News) November 3, 2025








