ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಆದರೆ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಇಂದು ನಿಮ್ಮ ಕನ್ನಡ ನ್ಯೂಸ್ ನೌ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಆದರೆ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಅನಾರೋಗ್ಯಕ್ಕೆ ಒಳಗಾಗಿಲ್ಲ ಎಂಬುದಾಗಿ ಜೆಡಿಎಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಇನ್ನೂ ಹೊರ ರಾಜ್ಯದ ಪ್ರವಾಸದಲ್ಲಿ ಇರುವಂತ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಇಂದು ಬೆಂಗಳೂರಿಗೆ ಮರಳಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.