ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಪುರುಷ ಪೊಲೀಸ್ ಸಿಬ್ಬಂದಿ ಮುಂದೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಆರೋಪ ವಿಚಾರವಾಗಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು ಆಕೆಯೇ ನಾಲ್ವರು ಪೊಲೀಸ್ ಬಂದಿಯ ಮೇಲೆ ಹಲ್ಲೆ ಮಾಡಿದ್ದಾಳೆ . ಜನವರಿ 1ರಂದು ಮತದಾರರ ಸಮೀಕ್ಷೆಯ ವೇಳೆ ಗಲಾಟೆ ನಡೆದಿತ್ತು. ಹುಬ್ಬಳ್ಳಿಯ ಚಾಲುಕ್ಯ ನಗರದಲ್ಲಿ ಗಲಾಟೆ ಆಗಿತ್ತು. ಸುಜಾತ ವಿರುದ್ಧ ಪ್ರಶಾಂತ್ ದೂರನ್ನ ಆಧರಿಸಿ ಜನವರಿ 5ರಂದು ಆಕೆಯನ್ನು ಬಂಧಿಸಲು ಪೊಲೀಸರು ತೆರಳಿದ್ದರು.
ಬಂಧಿಸಿ ವಾಹನ ಹತ್ತಿಸಿದ್ದಾಗ ಆಕೆಯ ಬಟ್ಟೆ ಬಿಚ್ಚಿಕೊಂಡಿದ್ದಾಳೆ. ನಾಲ್ವರು ಪೊಲೀಸ್ ಸಿಬ್ಬಂದಿ ಮೇಲು ಹಲ್ಲೆ ಮಾಡಿದ್ದಾಳೆ. ನಮ್ಮ ಸಿಬ್ಬಂದಿ ಆಕೆಗೆ ಬಟ್ಟೆ ಹಾಕಿ ಬಂಧಿಸಿ ಕರೆತಂದಿದ್ದಾರೆ. ಸದ್ಯ ಸುಜಾತ ನ್ಯಾಯಾಂಗ ಬಂಧನದಲ್ಲಿ ಇದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟಪಡಿಸಿದರು.








