ವಿಶಾಖಪಟ್ಟಣಂ: ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಬೆಳಗಿನ ಜಾವ 12.45ರ ಸುಮಾರಿಗೆ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ರೈಲಿಗೆ ಬೆಂಕಿ ಹೊತ್ತಿಕೊಂಡಾಗ ಪೀಡಿತ ಬೋಗಿಗಳಲ್ಲಿ ಒಂದರಲ್ಲಿ ೮೨ ಪ್ರಯಾಣಿಕರು ಮತ್ತು ಇನ್ನೊಂದರಲ್ಲಿ ೭೬ ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದರು. “ದುರದೃಷ್ಟವಶಾತ್, ಮೃತ ದೇಹವು ಪತ್ತೆಯಾಗಿದೆ …








