ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕಡ್ವಾ ಬಸಂತ್ಗರ್ ಪ್ರದೇಶದಲ್ಲಿ ಗುರುವಾರ ಸಿಆರ್ಪಿಎಫ್ ವಾಹನ ಅಪಘಾತಕ್ಕೀಡಾದ ಪರಿಣಾಮ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಉಧಂಪುರ ಎಎಸ್ಪಿ ಸಂದೀಪ್ ಭಟ್ ಈ ಘಟನೆಯನ್ನು ದೃಢಪಡಿಸಿದ್ದು, ಪೊಲೀಸರು ಆಂಬ್ಯುಲೆನ್ಸ್ ಜೊತೆಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, “ಕಾಂಡ್ವಾ-ಬಸಂತ್ಗರ್ ಪ್ರದೇಶದಲ್ಲಿ ಸಿಆರ್ಪಿಎಫ್ ವಾಹನಕ್ಕೆ ಡಿಕ್ಕಿ ಹೊಡೆದ ಸುದ್ದಿ ತಿಳಿದು ಆಘಾತವಾಗಿದೆ” ಎಂದಿದ್ದಾರೆ.
“ಈ ವಾಹನದಲ್ಲಿ ಸಿಆರ್ಪಿಎಫ್ನ ಹಲವಾರು ಧೈರ್ಯಶಾಲಿ ಜವಾನರು ಇದ್ದರು. ನಾನು ಈಗಷ್ಟೇ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ, ಅವರು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ನನಗೆ ಮಾಹಿತಿ ನೀಡುತ್ತಿದ್ದಾರೆ” ಎಂದು ಅವರು ಹೇಳಿದರು