ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಕೇರಳ ಪೊಲೀಸರ ಜೊತೆಗೆ ಚರ್ಚೆ ನಡೆಸಲಾಗುತ್ತಿದೆ. ಇಬ್ಬರು ಜಂಟಿಯಾಗಿ ಕಾರ್ಯಚರಣೆ ನಡೆಸಿದರೆ ಯಶಸ್ವಿಯಾಗುತ್ತೇವೆ. ಜಂಟಿ ಕಾರ್ಯಚರಣೆಯಿಂದ ಆರೋಪಿಗಳನ್ನು ಮಟ್ಟಹಾಕಲು ಸಾಧ್ಯವಾಗುತ್ತದೆ ಎಂದರು.
ಪ್ರವೀಣ್ ಹತ್ಯೆ ಹಿಂದೆ ಅನೇಕ ಮತಾಂಧ ಸಂಘಟನೆಗಳ ಕೈವಾಡ ಇದೆ ಎಂಬ ಅನುಮಾನ ಇದೆ. ಪ್ರವೀಣ್ ಹತ್ಯೆಗೆ ಆಕ್ರೋಶ ಇದ್ದದಕ್ಕೆ ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ ಈವರೆಗೆ 15 ಜನರನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗ್ತಿದೆ ಎಂದು ಹೇಳಿದ್ದಾರೆ.