ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಗಂಭೀರ ಆರೋಪದ ಬೆನ್ನಲ್ಲೇ ಮಾಜಿ ಶಾಸಕ, ಮುರುಘಾಮಠದ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ವಿರುದ್ಧವೂ ರೇಪ್ ಕೇಸ್ ದಾಖಲಾಗಿದೆ.
ಮುರುಘಾಮಠದ ಹಾಸ್ಟೆಲ್ ಲೇಡಿ ವಾರ್ಡನ್ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಎ1 ಎಸ್.ಕೆ. ಬಸವರಾಜ, ಎ2 ಪತ್ನಿ ಸೌಭಗ್ಯ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಸ್ಟೆಲ್ ನಲ್ಲಿ ಯಾರೂ ಇಲ್ಲದಿದ್ದಾಗ ರೇಪ್ ಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.
ಇನ್ನು ಮುರುಘಾಮಠದ ಶ್ರೀಗಳ ವಿರುದ್ಧ ಷಡ್ಯಂತ್ರ ನಡೆಸಿದ ಆರೋಪ ಮಾಜಿ ಶಾಸಕ ಬಸವರಾಜನ್ ವಿರುದ್ಧ ಜೀವಬೆದರಿಕೆ ಆರೋಪ ಮಾಡಲಾಗಿದೆ.
BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ