ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಎಸಿಬಿ (ACB) ಶಾಕ್ ನೀಡಿದ್ದು, ಬೆಂಗಳೂರಿನ ಬಿಬಿಎಂಪಿ (BBMP) ಎಲ್ಲ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ‘ಟೆಂಪೋ ಟ್ರಾವೆಲ್’ ಪಲ್ಟಿ: 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಬಿಡಿಎ ಬೆನ್ನಲ್ಲೇ ಬೆಂಗಳೂರಿನ ಬಿಬಿಎಂಪಿ ಎಲ್ಲ ಕಚೇರಿಗಳ ಮೇಲೆ ಎಸಿಬಿ ದಾಳಿ ಮಾಡಿದೆ. ಬೆಂಗಳೂರಿನ ಎಲ್ಲ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದೆ.
ಇಂದು ಏಕಕಾಲಕ್ಕೆ ಬಿಬಿಎಂಪಿಯ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದ್ದು, ಟಿಡಿಆರ್, ಟೌನ್ ಪ್ಲ್ಯಾನಿಂಗ್ ಕಚೇರಿಗಳು, ಪ್ಲ್ಯಾನ್ ಹಾಗೂ ಖಾತಾ ನೀಡುವ ಕಚೇರಿಗಳು ಸೇರಿದಂತೆ ಹಲವು ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ