ಉಡುಪಿ : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡುತ್ತಿದ್ದು, ಹಿಜಾಬ್ ತೊಟ್ಟು ಬಂದ ವಿದ್ಯಾರ್ಥಿನಿಯರ ತಡೆ ಹಿನ್ನೆಲೆಯಲ್ಲಿ ಉಡುಪಿಯ ಎಂಜಿಎಂ ಕಾಲೇಜು ಮುಂದೆ ಭಾರಿ ಹೈಡ್ರಾಮಾ ನಡೆದಿದೆ.
ಇಂದು ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೊಟ್ಟು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ತಡೆದಿದ್ದಾರೆ. ಈ ವೇಳೆ ಒಳಗಡೆ ಬಿಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಕೇಸರಿ ಪೇಟ ಧರಿಸಿ ಬಂದ ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಕಾಲೇಜಿನ ಮುಂದೆ ವಿದ್ಯಾರ್ಥಿಗಳು ಪರ-ವಿರೋಧ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಕಾಲೇಜು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಹೊಸದಾಗಿ ಕೆಲಸ ಹುಡುಕುವವರಿಗೆ ಗುಡ್ ನ್ಯೂಸ್: ಈ ವರ್ಷ ಶೇಕಡಾ 47 ರಷ್ಟು ಉದ್ಯೋಗ ಸೃಷ್ಟಿ : ಅಧ್ಯಯನ
ಕಾಲೇಜಿನ ಆವರಣದ ಮುಂದೆ ವಿ ವಾಂಟ್ ಜಸ್ಟಿಸ್ ಎಂದು ವಿದ್ಯಾರ್ಥಿನಿಯರು ಘೋಷಣೆ ಕೂಗಿದರೆ, ಕೇಸರಿ ಶಾಲು ಬೀಸುತ್ತಾ ಕೆಲ ವಿದ್ಯಾರ್ಥಿಗಳು ವಂದೇ ಮಾತರಂ, ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಇನ್ನು ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ಬಿಸಿ ಇನ್ನೂ ಹೆಚ್ಚಾಗಿದೆ. ಇದರ ನಡುವೆ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಹಿಜಾಬ್ ಗೆ ಅನುಮತಿ ನೀಡುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಿರುವಂತೆ ಕೋರಿ ವಿದ್ಯಾರ್ಥಿನಿಯರು ಹೈಕೋರ್ಟ್ ನಲ್ಲಿ ಸಲ್ಲಿಸಿರುವ ತಕರಾರು ಅರ್ಜಿಗಳು ಇಂದು ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.
ಕೊರೋನಾ ಲಸಿಕೆಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ : ಸುಪ್ರೀಂ ಕೋರ್ಟ್ | Aadhaar card not mandatory for vaccine