ಬೆಳಗಾವಿ : ಸ್ವಾಮೀಜಿ ಬಗ್ಗೆ ಮಹಿಳೆಯವರು ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ನೇಗಿನಹಾಳ ಗ್ರಾಮದ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರ ನಡುವಿನ ಫೋಣ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮುರುಘಾ ಮಠದ ಶಿವಾಚಾರ್ಯ ಅವರ ಮೇಲಿನ ಅತ್ಯಾಚಾರ ಆರೋಪದ ಕುರಿತು ಇಬ್ಬರು ಮಹಿಳೆಯರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮಹಿಳೆ ಸಂಭಾಷಣೆಯಲ್ಲಿ ಆರೋಪಿಸುತ್ತಾರೆ. ಆ ಸಂಭಾಷಣೆಯ ನಡುವೆ ಬಸವಸಿದ್ಧಲಿಂಗ ಸ್ವಾಮಿಯವರ ಹೆಸರನ್ನು ಮಹಿಳೆ ಉಲ್ಲೆಖಿಸುತ್ತಾಳೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.