ಕಣ್ಣೂರು : ಇಂದು ಬೆಳ್ಳಂಬೆಳಗ್ಗೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.
BIGG NEWS: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಇಂದು ಹಂತಕರು ಕೋರ್ಟ್ಗೆ ಹಾಜರು
ಇಂದು ಬೆಳಗ್ಗೆ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಈ ದಾಳಿಯಲ್ಲಿ ಕಚೇರಿಯ ಕಿಟಿಕಿ ಗಾಜುಗಳು ಪುಡಿಪುಡಿಯಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಬಾಂಬ್ ದಾಳಿ ನಡೆಸಿದವರು ಯಾರು? ಯಾವ ಕಾರಣಕ್ಕೆ ದಾಖಲಿ ನಡೆಸಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ಕುಮ್ಮಕ್ಕು ತುಂಬಾ ಅಪಾಯಕಾರಿ. ಪೊಲೀಸ್ ಠಾಣೆ 100 ಮೀಟರ್ ದೂರದಲ್ಲಿದ್ದರೂ ಏನೂ ಆಗದ ನಿದರ್ಶನಗಳಿವೆ. ಕಣ್ಣೂರಿನಂತಹ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ಅಂತಹ ರಕ್ಷಣೆ ನೀಡಿಲ್ಲ. ರಾಜ್ಯದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಬಿಜೆಪಿ ನಾಯಕ ಟಾಮ್ ವಡಕ್ಕನ್ ಕೇರಳ ರಾಜ್ಯ ಸರ್ಕಾರದ ಮೇಲೆ ಆರೋಪಿಸಿದ್ದಾರೆ.
Kerala | Visuals from RSS office in Payyannur, Kannur which was allegedly bombed early this morning, leaving the window glass broken pic.twitter.com/ALjpuXNH2K
— ANI (@ANI) July 12, 2022