ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ.
BIGG NEWS: ಲಂಡನ್ ನಲ್ಲಿ ಪತ್ನಿ ಜೊತೆ ಗೋ ಪೂಜೆ ಮಾಡಿದ ರಿಷಿ ಸುನಾಕ್; ಎಲ್ಲರಿಂದಲೂ ಪ್ರಶಂಸೆ
ಬೆಂಗಳೂರಿನ ಸಚಿವ ಡಾ.ಕೆ. ಸುಧಾಕರ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಹೆಚ್. ಮುನಿಯಪ್ಪ ಸುಧಾಕರ್ ಜೊತೆಗೆ ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ನ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧನಗೊಂಡಿರುವ ಕೆ.ಹೆಚ್. ಮುನಿಯಪ್ಪ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಕೆ.ಹೆಚ್. ಮುನಿಯಪ್ಪ ಭೇಟಿಯ ಬಳಿಕ ಬೆಂಗಳೂರಿನಲ್ಲಿ ಸಚಿವ ಡಾ.ಕೆ. ಸುಧಾಕರ್ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನನು ಭೇಟಿಯಾಗಿ ಮುನಿಯಪ್ಪ ಭೇಟಿ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.