ಮೈಸೂರು : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲು ಇಂದು ಮೈಸೂರಿಗೆ ಆಗಮಿಸಿದ್ದಾರೆ.
BIG NEWS: CBI ವಿರುದ್ಧ ಸಿಡಿದೆದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿ, ಪದೇ ಪದೇ ಕಿರುಕುಳವೆಂದು ಕಿಡಿ
ಸೋನಿಯಾ ಗಾಂಧಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿದ್ದಾ.ರೆ.ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ನಾಯಕರ ಆಗಮಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸೋನಿಯಾಗಾಂಧಿ ಅವರನ್ನು ಸ್ವಾಗತಿಸಿದ್ದಾರೆ.
ಇಂದು ಸೋನಿಯಾ ಗಾಂಧಿ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ.