ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,038 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,038 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 47 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525604 ಕ್ಕೆ ಏರಿಕೆಯಾಗಿದೆ.

#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,038 ಹೊಸ ಪ್ರಕರಣಗಳು, 16,994 ಚೇತರಿಕೆಗಳು ಮತ್ತು 47 ಸಾವುಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 1,39,073

ದೈನಂದಿನ ಪಾಸಿಟಿವಿಟಿ ದರ 4.44%

Share.
Exit mobile version