ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 49 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525709 ಕ್ಕೆ ಏರಿಕೆಯಾಗಿದೆ.

ಕೋವಿಡ್-19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,528 ಹೊಸ ಪ್ರಕರಣಗಳು ಮತ್ತು 49 ಸಾವುಗಳು ದಾಖಲಾಗಿವೆ. ಸಕ್ರಿಯ ಪ್ರಕರಣ 1,43,449

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇಲ್ಲಿಯವರೆಗೆ 199.98 ಕೋಟಿ ಒಟ್ಟು ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.

Share.
Exit mobile version