ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526033 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ 18143 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 152200 ಸಕ್ರಿಯ ಕೇಸ್ ಗಳಿವೆ.

Share.
Exit mobile version