ಬೆಂಗಳುರು : ತುಮಕೂರಿನ ಕಳ್ಳಂಬೆಳ್ಳೆಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
Breaking news: ಗಣಿ ಗುತ್ತಿಗೆ ಪ್ರಕರಣ: ಜಾರ್ಖಂಡ್ ಸಿಎಂ ʻಹೇಮಂತ್ ಸೊರೆನ್ʼ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದ, ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ಖರ್ಚುಗಳನ್ನು ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
BIGG BREAKING NEWS : ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ : ಗುಜರಾತ್, ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.