ಬೆಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. 3 ಪ್ರಕರಣಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ತನಿಖೆಯಿಂದ ಹಿಂದೆ ಬಿದ್ದಿಲ್ಲ. ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ.ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIGG NEWS : ರಾಜ್ಯ ಸರ್ಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ