ಚನ್ನಪಟ್ಟಣ : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ನಡೆದಿದೆ.
ದೆಹಲಿ: ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯ ಪ್ರಕರಣ, ಚಿಕಿತ್ಸೆ ಫಲಿಸದೇ 10 ವರ್ಷದ ಬಾಲಕ ಸಾವು
ಚನ್ನಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ. ಯಾಕಂದರೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸಿ.ಪಿ ಯೋಗೇಶ್ವರ ಕಾರು ಬರುತ್ತಿದಂತೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಚನ್ನಪಟ್ಟಣದಲ್ಲಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತಿಭಟನೆ ವೇಳೆ ಕಾರ್ಯಕರ್ತರನು ಪೊಲೀಸರು ಬಂಧಿಸಿದ್ದಾರೆ.
ಇದರ ಬೆನ್ನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದಾರೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.