ಗುರುಗ್ರಾಮ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ.
ಗುರುಗ್ರಾಮ ಮೇದಾಂತ ಆಸ್ಪತ್ರೆಯು ಮುಲಾಯಂ ಸಿಂಗ್ ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ ಮತ್ತು ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ. ಇದಕ್ಕೂ ಮುನ್ನ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ (ಸಿಸಿಯು) ಗೆ ದಾಖಲಿಸಲಾಗಿತ್ತು. ವೈದ್ಯರ ತಂಡವು ಮುಲಾಯಂ ಸಿಂಗ್ ಅವರ ಆರೋಗ್ಯವನ್ನು ಸಂಪೂರ್ಣವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಮುಲಾಯಂ ಅವರ ಆರೋಗ್ಯ ಹದಗೆಟ್ಟ ನಂತರ ಅಕ್ಟೋಬರ್ 2 ರಂದು ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದರು.
82 ವರ್ಷದ ಮುಲಾಯಂ ಸಿಂಗ್ ಯಾದವ್ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಆದರೆ ಎರಡು ದಿನಗಳ ಹಿಂದೆ, ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.