ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
BIGG NEWS : ‘ಮಂಕಿಪಾಕ್ಸ್ ಸೋಂಕು’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ ಮೃತರನ್ನು ಲಕ್ಷ್ಮಿ ನಾರಾಯಣ ನಾಯ್ಕ, ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ಎಂದು ಗುರುತಿಸಲಾಗಿದೆ.
ಸದ್ಯ ದುರಂತ ನಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘೋರ ದುರಂತ: ಗೋಬಿಂದ್ ಸಾಗರ್ನಲ್ಲಿ ಈಜಲು ಹೋದ 7 ಯುವಕರು ನೀರು ಪಾಲು, ಪೋಷಕರ ಆಕ್ರಂದನ