ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ರಾಜ್ಯ ಹೈಕೋರ್ಟ್ ಅನುಮತಿ ನೀಡಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಅಚರಣೆಗೆ ಅಡ್ಡಿಯಿಲ್ಲ ಎಂದಿದೆ.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಈ ವೇಳೆ ಅನುಮತಿ ಕೋರಿದ ಅರ್ಜಿಗಳನ್ನ ಪರಿಶೀಲಿಸಿ ಅನುಮತಿ ನೀಡಬಹುದು ಎಂದಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಅಚರಣೆಗೆ ಅಡ್ಡಿಯಿಲ್ಲ ಎಂದಿದೆ. ಅದ್ರಂತೆ, ಅಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.