ಬೆಂಗಳೂರು : ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣ ಸಂಬಂಧ ಪೊಲೀಸರು ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
BREAKING NEWS : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ : 75 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಬೊಮ್ಮಾಯಿ ಹಸಿರು ನಿಶಾನೆ
ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಳವಡಿಸಿದ ಟಿಪ್ಪು ಭಾವಚಿತ್ರ ಇದ್ದ ಫ್ಲೆಕ್ಸ್ ಅನ್ನು ರಾಷ್ಟ್ರ ರಕ್ಷಣಾ ಪಡೆ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಹರಿದು ಹಾಕಿದ್ದರು. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘಟನೆ ಸಂಬಂಧ ಕಾನೂನು ಹೋರಾಟ ಮಾಡಲಾಗುವುದು ಎಂದು ಹೇಳಿದ್ದರು. ಇದೀಗ ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಅವರ ಭಾವಚಿತ್ರ ಹರಿದು ಹಾಕಿದ್ದರು.