ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
BIGG NEWS: ವಿವಾದದ ನಡುವೆಯೂ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಹಾರಿದ ತಿರಂಗಾ
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಭಾರತ ದೇಶಕ್ಕೆ ಈಗ ಅಮೃತ ಗಳಿಗೆ ಬಂದಿದೆ. ಹಲವಾರು ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಸಹಸ್ರ ಸಂಖ್ಯೆಯ ಮಹನೀಯರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದರು.
BIGG NEWS : ಕೊಡಗು, ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು
ಕಿತ್ತೂರುರಾಣಿ ಚೆನ್ನಮ್ಮ, ರಾಯಣ್ಣರನ್ನು ಮರೆಯುವಂತಿಲ್ಲ. ನಾನು ಜಿಲಿಯನ್ ವಾಲಾಬಾಗ್ ಮರೆಯಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕರ ಬಲಿದಾನ ಆಗಿದೆ. ಬ್ರಿಟಿಷರ ವಿರುದ್ಧ ರೈತರು ಕರ ನಿರಾಕರಣೆ ಚಳವಳಿ ಮಾಡಿದ್ದರು. ಈ ಚಳವಳಿಗೆ ಸಿಪಾಯಿ ದಂಗೆ ಪೂರಕವಾಗಿ ನಿಂತಿತ್ತು. ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮರೆಯಲು ಅಸಾಧ್ಯ. ಅಹಿಂಸೆ ಮಾರ್ಗದ ಮೂಲಕ ಸ್ವಾತಂತ್ರ ಪಡೆಯಬಹುದು ಎಂದು ಮಹತ್ಮಾ ಗಾಂಧೀಜಿ ತೋರಿಸಿಕೊಟ್ಟಿದ್ದಾರೆ ಎಂದರು.