ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತ ಎಂದು ಘೋಷಿಸಿದ ನಂತರ, ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರ ಗೆಲುವಿಗಾಗಿ ಅವರನ್ನು ಅಭಿನಂದಿಸಿದ್ದಾರೆ.
ಖರ್ಗೆ ಅವರು ಒಟ್ಟು 9,385 ಮತಗಳ ಪೈಕಿ 7,897 ಮತಗಳನ್ನು ಪಡೆದುಕೊಂಡಿದ್ದಾರೆ, 2019 ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದಾಗಿನಿಂದ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಖರ್ಗೆ ತುಂಬಲಿದ್ದಾರೆ.