ಬೆಂಗಳೂರು : ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
BIGG NEWS: ಬಿಎಸ್ ವೈ ವಿರುದ್ಧ ಸೂಕ್ತ ತನಿಖೆಯಾಗಲಿ; ಸತ್ಯಾಂಶ ಹೊರಬರಬೇಕು- ಸಂತೋಷ್ ಹೆಗ್ಡೆ
ವಿಧಾನಪರಿಷತ್ ನಲ್ಲಿ ಸದಸ್ಯ ಅರುಣ ಅವರು ಮಾತನಾಡಿ, ನಾಲ್ಕು ವರ್ಷದಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಿಲ್ಲ. ಅನೇಕ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
BIG NEWS: ಅಮೆಜಾನ್ನ ʻಜೆಫ್ ಬೆಜೋಸ್ʼನ್ನು ಹಿಂದಿಕ್ಕಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾದ ʻಗೌತಮ್ ಅದಾನಿʼ!
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ನಾಲ್ವರು ಎಂಡಿಗಳ ನೇತೃತ್ವದ ಸಮಿತಿಯ ವರದಿ ಬಂದ ನಿರ್ಧರಿಸಲಾಗುವುದು. ಆದಷ್ಟು ಬೇಗ ಸಾಆರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.