ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ ಕೋರ್ಟ್ 9 ದಿನಗಳ ಕಾಲ ನ್ಯಾಯಾಂಗಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ.
ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇನ್ನು ಮುರುಘಾ ಶ್ರೀಗಳನ್ನು ಭಾನುವಾರ ಅಧಿಕಾರಿಗಳು ಮುರುಘಾ ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಬೆಳಗ್ಗೆ 11.45 ರಿಂದ ಮಧ್ಯಾಹ್ನ 2.30 ರವರೆಗೆ ಮಠದಲ್ಲಿ ಮಹಜರು ನಡೆಯಿತು. ಮಠದಿಂದ ಮಹಜರು ಮುಗಿಸಿಕೊಂಡ ಹೋದ ಶ್ರಿಗಳು ಡಿವೈಎಸ್ ಪಿ ಕಚೇರಿಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದಿದ್ದಾರೆ. ನಂತರ ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.