ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ ಕೋರ್ಟ್ ಶಾಕ್ ನೀಡಿದ್ದು, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿದೆ.
BIGG NEWS: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯ; ಕೋರ್ಟ್ ಗೆ ಹಾಜರು
ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಚಿತ್ರದುರ್ಗದ ಜಿಲ್ಲಾ 2 ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತಿರಿಸಿ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಮುರುಘಾಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಈಗಾಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದ ಶ್ರೀಗಳಿಗೆ ಇದೀಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.