ನವದೆಹಲಿ : ದೇಶಾದ್ಯಂತ ಇಂದು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಪ್ರಧಾನಿ ಮೋದಿ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
देशवासियों को #स्वतंत्रतादिवस की हार्दिक शुभकामनाएं। जय हिंद!
Greetings on this very special Independence Day. Jai Hind! #Iday2022
— Narendra Modi (@narendramodi) August 15, 2022
ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7.15 ಕ್ಕೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ 2 ವರ್ಷದ ಸ್ವಾತಂತ್ರ್ಯ ದಿನಾಚರಣೆಗಳು ಕೋವಿಡ್ 19 ಸೋಂಕಿನ ಹಾವಳಿಯಿಂದ ಮಂಕಾಗಿದ್ದವು. ಈ ಬಾರಿ ಕೋವಿಡ್ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಸೇರಿ ಹಲವು ಅಭಿಯಾನಗಳನ್ನು ಸರ್ಕಾರ ಹಮ್ಮಿಕೊಂಡಿದೆ.
ಇಂದು ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ, ಹೀಲ್ ಇಂಡಿಯಾ ಹಾಗೂ ಹೀಲ್ ಬೈ ಇಂಡಿಯಾ ಎಂಬ 2 ಹೊಸ ಯೋಜನೆಗಳು ಸೇರಿದಂತೆ ಹಲವು ಬಂಪರ್ ಘೋಷಣೆಗಳನ್ನು ಘೋಷಿಸುವ ಸಾಧ್ಯತೆ ಇದೆ.ಜೊತೆಗೆ ದೇಶ 100 ನೇ ಸ್ವಾತಂತ್ರ್ಯ ದಿನ ಆಚರಿಸಿಕೊಳ್ಳುವ 2047 ರೊಳಗೆ ರಕ್ತಕ್ಕೆ ಸಂಬಂಧಿಸಿದ ಸಿಕಲ್ ಸಲ್ ರೋಗ ಮುಕ್ತ ದೇಶ ನಿರ್ಮಾಣದ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ.