ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
BIG NEWS : ʻಕೊಹಿನೂರು ವಜ್ರʼ ಭಗವಾನ್ ಜಗನ್ನಾಥನಿಗೆ ಸೇರಿದ್ದು, ವಾಪಸ್ ಕೊಡಿ: ಒಡಿಶಾದ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ
ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.
ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ನಾಳೆಗೆ ಮುಂದೂಡಲಾಗಿದೆ.