ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಜೈಲುಪಾಲಾಗಿರುವ ಮುರುಘಮಠದ ಶ್ರೀಗಳನ್ನು ಆರೋಗ್ಯ ತಪಾಸಣೆಗಾಗಿ ಇಂದು ಮತ್ತೆ ಚಿತ್ರದುರ್ಗ ಜಿಲ್ಲಾಸ್ಪತ್ರಗೆ ಕರೆತರಲಾಗಿದೆ.
ನಿಮ್ಮ ಮೊಬೈಲ್ನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ʻಫೋನ್ ಹ್ಯಾಕ್ʼ ಆಗಿದೆ ಎಂದರ್ಥ… ಅದೇನು ಅಂತಾ ಇಲ್ಲಿ ನೋಡಿ!
ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ಎರಡು ತಾಸುಗಳಿಂದ ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮುರುಘಾಶ್ರೀಗಳ ವಿಚಾರಣೆ ನಡೆಸಲಾಗಿದೆ. ಬಳಿಕ ಆರೋಗ್ಯ ತಪಾಸಣೆಗಾಗಿ ಡಿವೈಎಸ್ ಪಿ ಕಚೇರಿಯಿಂದ ಜಿಲ್ಲಾಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ. ಈ ವೇಳೆ ಎಸ್.ಪಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆಯ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ.