ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.
BIGG NEWS : ಇಂದು ‘ಶಿವಮೊಗ್ಗ-ಭದ್ರಾವತಿ ನಗರ’ದ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರು ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ( School and College Holiday ) ಘೋಷಣೆ ಮಾಡಲಾಗಿದೆ.